Publish Date: Sun, 30 Nov 2025 (17:38 IST)
Updated Date: Sun, 30 Nov 2025 (17:41 IST)
ಬೀದರ್: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಒಟ್ಟಾಗಿ ಮಾತನಾಡಿರುವುದು ಖುಷಿಯ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮಾತುಕತೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿ, ಸಿಎಂ ಮತ್ತು ಡಿಸಿಎಂ ಒಗ್ಗೂಡಿರುವುದು ನನಗೆ ತುಂಬಾ ಖುಷಿ ತಂದಿದೆ. ಬಳಿಕ ಅವರು ಮಾಧ್ಯಮದವರಿಗೆ ಏನು ಬೇಕೋ ಅದೆಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ.ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಹೈಕಮಾಂಡ್ ದೆಹಲಿಗೆ ಕರೆದರೂ ಇಬ್ಬರೂ ತೆರಳಿ ಹೈಕಮಾಂಡ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿವಕುಮಾರ್ ಬೀದರ್‌ನಲ್ಲಿ ಹೇಳಿಕೆ ನೀಡಿದ್ದಾರೆ ಎಂದರು.
"ಅಗತ್ಯವಿದ್ದರೆ ರಾಜ್ಯ ನಾಯಕರು ದೆಹಲಿಗೆ ಭೇಟಿ ನೀಡಬಹುದು" ಎಂದು ಭಾನುವಾರ ಸುಳಿವು ನೀಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಕೌಂಟರ್ ನೀಡಿದ ಬೆನ್ನಲ್ಲೇ, ಬ್ರೇಕ್‌ಫಾಸ್ಟ್ ನೆಪದಲ್ಲಿ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ.
ಇಬ್ಬರು ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.