ಬೆಂಗಳೂರು: ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಕ್ಕಾಗಲೂ ಇದನ್ನೇ ಹೇಳಿದ್ದೇನೆ. ಈ ವಿಚಾರದಲ್ಲಿ ಅಭಿಪ್ರಾಯ ಭಿನ್ನತೆ ಇಲ್ಲ ಎಂದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೈಸೂರಿನಲ್ಲಿ ಹೇಳಿದರು.
ಭಾರತದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಮನೆಯವರೇ ಹಾಗೆ ಕೂಗಿದ್ದರೂ ಅವರ ಮೇಲೆ ಕ್ರಮವಾಗಬೇಕು ಎಂದು ಹೇಳಿದರು.
ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಿರಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ. 1971ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪಾಕಿಸ್ತಾನದವರ ಮಂಡಿಯೂರಿಸಿದ್ದರು. ಈಗ ಲಕ್ಷಾಂತರ ಜನರ ಮಂಡಿಯೂರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತೀರ್ಮಾನಗಳಿಗೆ ನಮ್ಮ ಬೆಂಬಲವಿದೆ ಎಂದರು.
ಪಾಕ್ ಪರ ಘೋಷಣೆ ದೇಶದ್ರೋಹ: ಬೆಂಗಳೂರು: ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ದೇಶದ್ರೋಹಕ್ಕೆ ಸಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ತಪ್ಪು ಎಂದು ಅವರು ಹೇಳಿದ್ದಾರೆ.