Publish Date: Wed, 09 Mar 2022 (16:12 IST)
Updated Date: Wed, 09 Mar 2022 (20:00 IST)
ಧಾರವಾಡ : ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ.
ಪೆಂಡಾರ್ ಗಲ್ಲಿಯ ಹಾಲ್ನಲ್ಲಿ ಮದುವೆ ಸಮಾರಂಭವೊಂದಕ್ಕೆ ಹೋದ ಧಾರವಾಡ ನಗರದ ಜಾಂಬವಂತನಗರ ನಿವಾಸಿ ಸಾದಿಕ್, ಇಬ್ಬರ ಮಧ್ಯೆ ಜಗಳ ನಡೆಯುತ್ತಿರುವುದನ್ನು ಬಿಡಿಸಲು ಹೋಗಿದ್ದನು.
ಈ ವೇಳೆ ತಳ್ಳಾಟ, ನೂಕಾಟದಲ್ಲಿ ಸಿಲುಕಿದ್ದರಿಂದ ಸಾಧಿಕ್ ತಲೆಗೆ ಗೇಟ್ ಬಡಿದು ಗಂಭೀರ ಗಾಯಗೊಂಡಿದ್ದಾನೆ.
ತಕ್ಷಣ ಸ್ಥಳದಲ್ಲಿದ್ದ ಜನರು ಆತನನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾಧಿಕ್ ಸಾವನ್ನಪ್ಪಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ.