Publish Date: Sun, 28 Jan 2018 (12:29 IST)
Updated Date: Sun, 28 Jan 2018 (12:32 IST)
ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಿಎಂ ಮನೋಹರ್ ಪರಿಕ್ಕರ್ ಅವರ ಈ ದಿಡೀರ್ ಭೇಟಿ ಭಾರೀ ಅಚ್ಚರಿಗೆ ಕಾರಣವಾಗಿದೆ. ಸ್ಪೀಕರ್, ಡೆಪ್ಉಟಿ ಸ್ಪೀಕರ್ ಜತೆಗೆ ಕರ್ನಾಟಕ ಭಾಗದ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿದ ಸಿಎಂ ಪರಿಶೀಲನೆ ನಡೆಸಿದರು.
ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಆದರೆ ಒಂದೆಡೆ ಮಹದಾಯಿ ನೀರಿಗಾಗಿ ಪ್ರತಿಭಟನೆಗಳ ನಡೆಯುತ್ತಿದ್ದರೆ ಇನ್ನೊಂದೆಡೆ ಸಿಎಂ ನದಿ ಕೊಳ್ಳದಲ್ಲಿ ಪರಿಶೀಲನೆ ನಡೆಸಿದ್ದು, ಕರ್ನಾಟಕಕ್ಕೆ ನೀರು ಸಿಗುವ ಆಶಾಭಾವನೆ ಸಿಕ್ಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ