Publish Date: Thu, 30 Apr 2020 (16:05 IST)
Updated Date: Thu, 30 Apr 2020 (16:07 IST)
ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ಎರಡು ಲಕ್ಷ ಮೌಲ್ಯದ ಗೋವಾ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
486 ಲೀ. ಗೋವಾ ಮದ್ಯವನ್ನು ಅಬಕಾರಿ ಸಿಬ್ಬಂದಿಗಳು ಬೆಳಗ್ಗಿನ ಜಾವ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಗೋವಾ ಗಡಿಗೆ ಹೊಂದಿಕೊಂಡಿರುವ ಕಾರವಾರ ತಾಲೂಕಿನ ಮಾಜಾಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಖಚಿತ ಮಾಹಿತಿ ಮೇರೆಗೆ ಅಬಕಾರಿ ಸಿಬ್ಬಂದಿಗಳು ಬೆಳಗ್ಗೆ 1.45 ರ ಸುಮಾರಿಗೆ ದಾಳಿ ನಡೆಸಿದ್ದಾರೆ. ಆಗ ಅಕ್ರಮವಾಗಿ ಗೋವಾ ಮದ್ಯವನ್ನು ತಲೆಹೊರೆಯಲ್ಲಿ ಸಾಗಿಸುತ್ತಿದ್ದ ಆರೋಪಿಗಳು ಮದ್ಯವನ್ನು ಬಿಟ್ಟು ಪರಾರಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಅಬಕಾರಿ ಅಧಿಕಾರಿಗಳು 216 ಲೀ. ಗೋವಾ ಮದ್ಯ, 270 ಲೀ. ಗೋವಾ ಫೆನ್ನಿ ಸೇರಿದಂತೆ ಎರಡು ಲಕ್ಷ ರೂ. ಮೌಲ್ಯದ ಒಟ್ಟು 486 ಲೀ. ಮದ್ಯವನನ್ನು ಜಫ್ತು ಮಾಡಿದ್ದಾರೆ.