ನೀವು ಚಪ್ಪರಿಸಿ ತಿನ್ನುವ ಗೋಬಿ ಮಂಚೂರಿಗೆ ಕರ್ನಾಟಕದಲ್ಲಿ ನಿಷೇಧ

Krishnaveni K
ಸೋಮವಾರ, 11 ಮಾರ್ಚ್ 2024 (10:13 IST)
Photo Courtesy: Twitter
ಬೆಂಗಳೂರು: ನೀವು ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗೆ ಇನ್ನು ರಾಜ್ಯದಲ್ಲಿ ನಿಷೇಧ ಹೇರುವ ಸಾಧ‍್ಯತೆಯಿದೆ. ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಸುಳಿವು ನೀಡಿದ್ದಾರೆ.

ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಮತ್ತು ಬಣ್ಣ ಮಿಶ್ರಣ ಮಾಡಲಾಗುತ್ತದೆ ಎಂಬುದು ಬೆಳಕಿಗೆ ಬಂದಿದೆ. ಈ ಅಸುರಕ್ಷಿತ ರಾಸಾಯನಿಕಗಳನ್ನು ಬಳಸದಂತೆ ಆರೋಗ್ಯ ಇಲಾಖೆ ಕಡಿವಾಣ ಹಾಕಲು ಮುಂದಾಗಿದೆ. ಈ ಬಗ್ಗೆ ಸದ್ಯದಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ವಿಭಾಗವು ಈಗಾಗಲೇ ಈ ಎರಡೂ ಆಹಾರ ವಸ್ತುಗಳ ಸ್ಯಾಂಪಲ್ ಪರೀಕ್ಷೆ ಮಾಡಿದೆ. ಈ ಮೂಲಕ ಆರೋಗ್ಯಕ್ಕೆ ಹಾನಿಕಾರಕವಾದ ಅಂಶ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದೇ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಹೊರಡಿಸಲಿದ್ದಾರೆ.

ಈಗಾಗಲೇ ಪುದುಚೇರಿಯಲ್ಲಿ ಕಾಟನ್ ಕಾಂಡಿಗೆ ಅಸುರಕ್ಷಿತ ರಾಸಾಯನಿಕ ಬಳಸಲಾಗುತ್ತದೆ ಎಂಬ ಕಾರಣಕ್ಕೆ ನಿಷೇಧ ಹೇರಲಾಗಿದೆ. ಇದೀಗ ಕರ್ನಾಟಕದಲ್ಲೂ ಇದೇ ಕ್ರಮ ಕೈಗೊಳ್ಳುವ ಸಾಧ‍್ಯತೆಯಿದೆ. ಹೀಗಾಗಿ ಗೋಬಿ ಮಂಚೂರಿ ಸಿಕ್ಕ ಸಿಕ್ಕಲ್ಲಿ ತಿನ್ನುವ ಮೊದಲು ಹುಷಾರು!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments