Daily Horoscope

ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ! ಗಂಭೀರ ಸ್ಥಿತಿ?

Webdunia
ಮಂಗಳವಾರ, 24 ಮೇ 2022 (07:02 IST)
ಧಾರವಾಡ : ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
 
ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. 

ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದ ಲಾರಿ ಡ್ರೈವರ್ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಅಲ್ಲದೇ ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರದವರಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ. ಸದ್ಯ ಗಾಯಾಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments