Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold Price
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದು 1,65,140 ರೂ.ಗಳಾಗಿವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 152 ಏರಿಕೆಯಾಗಿದ್ದು 16,309 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 140 ರೂ ಗಳಷ್ಟು ಏರಿಕೆಯಾಗಿದ್ದು 14,950 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 114 ರೂ ಏರಿಕೆಯಾಗಿದ್ದು 12,232 ರೂ.ಗಳಷ್ಟಿದೆ.

ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,60,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video