Publish Date: Thu, 31 Mar 2022 (20:57 IST)
Updated Date: Thu, 31 Mar 2022 (21:04 IST)
ವೇಯ್ಟ್ ಲಿಫ್ಟಿಂಗ್ನಲ್ಲಿ ಹಾಸನದ ಯುವತಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಹೆಸರು ತಂದಿದ್ದಾರೆ. ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬನ್ನೂರು ಗ್ರಾಮದ ಉಷಾ 87 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಹಾಲಿ ರೈಲ್ವೆ ಉದ್ಯೋಗಿಯಾಗಿರುವ ಉಷಾ ಜುಲೈ ತಿಂಗಳಲ್ಲಿ ಇಂಗ್ಲೆಂಡ್ನಲ್ಲಿ ನಡೆಯಲಿರೋ ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಭಾಗಿಯಾಗಲಿದ್ದಾರೆ.