Select Your Language

Notifications

webdunia
webdunia
webdunia
webdunia

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ, ಶಾಸಕ ವಿನಯ್ ಕುಲಕರ್ಣಿಗೆ ಇಡಿ ಶಾಕ್‌

Aishwarya Gowda, Gold Smuggling Case, MLA Vinay Kulkarni

Sampriya

ಬೆಂಗಳೂರು , ಗುರುವಾರ, 24 ಏಪ್ರಿಲ್ 2025 (15:15 IST)
Photo Credit X
ಬೆಂಗಳೂರು: ಚಿನ್ನ ವಂಚನೆ ಪ್ರಕರಣ ಸಂಬಂಧ ಸುದ್ದಿಯಾಗಿದ್ದ ಐಶ್ವರ್ಯ ಗೌಡ  ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  

ವಿನಯ್ ಅವರ ಬೆಂಗಳೂರಿನಲ್ಲಿರುವ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ನಡೆಸಿದ್ದಾರೆ.  ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಈ ದಾಳಿ ನಡೆಸಲಾಗಿದೆ.

ಈ ಹಿಂದೆ ಐಶ್ವರ್ಯ ಗೌಡ ವಿರುದ್ಧ ಸುಮಾರು ₹9 ಕೋಟಿ ಮೌಲ್ಯದ ಚಿನ್ನ ವಂಚನೆ ಆರೋಪ ಕೇಳಿಬಂದಿತ್ತು.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

ಪ್ರಕರಣ ಸಂಬಂಧ 2024 ರ ಡಿಸೆಂಬರ್​​ನಲ್ಲಿ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಕೆಎನ್ ಹರೀಶ್ ಅವರನ್ನು ಬಂಧಿಸಲಾಗಿತ್ತು. ಅದಾದ ನಂತರ ಐಶ್ವರ್ಯ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

PM Narendra Modi: ಆ ಉಗ್ರರಿಗೆ ನಿರೀಕ್ಷೆಯೇ ಮಾಡಿರದ ಸಾವು ಕರುಣಿಸಲಿದ್ದೇವೆ: ಪ್ರಧಾನಿ ಮೋದಿ