Select Your Language

Notifications

webdunia
webdunia
webdunia
webdunia

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ
bangalore , ಭಾನುವಾರ, 3 ಅಕ್ಟೋಬರ್ 2021 (21:20 IST)
ನಿನ್ನೆಯಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇದು ಬಂಗಾರ ಪ್ರಿಯರಿಗೆ ಹಾಗೂ ಆಭರಣ ಕೊಳ್ಳುವವರಿಗೆ ಭಾರೀ ನಿರಾಸೆ ಉಂಟು ಮಾಡಿದೆ. ನಿನ್ನೆ 10 ಗ್ರಾಂ ಚಿನ್ನಕ್ಕೆ 980 ರೂಪಾಯಿ ಏರಿಕೆಯಾಗಿತ್ತು. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,470 ರೂ. ಇತ್ತು. ಇಂದು 10 ಗ್ರಾಂ ಚಿನ್ನದ ಬೆಲೆ 45,480 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ ಹೆಚ್ಚಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,470 ರೂ. ಇತ್ತು. ಇಂದು 46,480 ರೂಪಾಯಿಗೆ ಏರಿಕೆಯಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,460 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,500 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 49,710 ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.
ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ(Silver Rate)ಇಂದು ಏರಿಕೆ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 59,500 ರೂ. ಇತ್ತು. ಇಂದು ಅದೇ ಬೆಳ್ಳಿಗೆ 60,500 ರೂ. ಆಗಿದೆ. ಇಂದು ಬೆಳ್ಳಿ ಬೆಲೆ 1000 ರೂಪಾಯಿ ಹೆಚ್ಚಾಗಿದೆ. ನಿನ್ನೆ 2150 ರೂ. ಇಳಿದಿತ್ತು. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 60,500 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 64,600 ರೂ. ಆಸುಪಾಸಿನಲ್ಲಿದೆ.ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಎರಡು ದಿನ ರಾಜ್ಯದಲ್ಲಿ ಧಾರಕಾರ ಮಳೆ ಸಾಧ್ಯತೆ