Select Your Language

Notifications

webdunia
webdunia
webdunia
webdunia

ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
bangalore , ಶುಕ್ರವಾರ, 10 ಡಿಸೆಂಬರ್ 2021 (17:26 IST)
ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 10, ಶುಕ್ರವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
 ಬೆಂಗಳೂರು:
ಚಿನ್ನ ಕೊಳ್ಳುವ ಸಮಯದಲ್ಲಿ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ.
ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ , ಬೆಳ್ಳಿ ಬೆಲೆ  ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 10, ಶುಕ್ರವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿ ಇಳಿಕೆಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 65,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,600 ರೂಪಾಯಿ ದಾಖಲಾಗಿದೆ. ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ