Webdunia - Bharat's app for daily news and videos

Install App

Gold Smuggling Case: ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ ಜತೆ ಉದ್ಯಮಿಯ ಪುತ್ರನಿಗೂ ಸಂಕಷ್ಟ

Sampriya
ಸೋಮವಾರ, 10 ಮಾರ್ಚ್ 2025 (19:26 IST)
ಬೆಂಗಳೂರು: ದುಬೈನಿಂದ ಕೋಟ್ಯಂತರ ರೂಪಾಯಿಯ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಪ್ರಕರಣ ಸಂಬಂಧ ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿಯ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ.

ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments