Publish Date: Thu, 01 Sep 2022 (14:32 IST)
Updated Date: Thu, 01 Sep 2022 (14:25 IST)
ಚಿನ್ನದ ಗಟ್ಟಿಯನ್ನು ಬಚ್ಚಿಟ್ಟು ಕಳ್ಳ ಸಾಗಣೆಗೆ ಯತ್ನಿಸಿದ ಚಾಲಾಕಿ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿ ಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 22ಲಕ್ಷ ಮೌಲ್ಯದ 442 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ವೈಮಾನಿಕ ಗುಪ್ತಚರ ದಳ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡುತ್ತಿರುವುದು ತಿಳಿದುಬಂದಿದೆ. ಬಂಧಿತ ವ್ಯಕ್ತಿ ತನ್ನ ಗುದನಾಳದಲ್ಲಿ ಕ್ಯಾಪ್ಸುಲ್ ಮಾದರಿಯಲ್ಲಿ ಚಿನ್ನವನ್ನು ಬಚ್ಟಿಟ್ಟುಕೊಂಡು ಸಾಗಣೆಗೆ ಯತ್ನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.