Publish Date: Wed, 06 Apr 2022 (19:54 IST)
Updated Date: Wed, 06 Apr 2022 (19:58 IST)
ಸುಮಾರು 2 ವರ್ಷಗಳ ಬಳಿಕ ರಾಜ್ಯದಲ್ಲಿ ಮಾಸ್ಕ್ಗೆ ಗುಡ್ ಬೈ ಹೇಳುವ ಕಾಲ ಸನ್ನಿಹಿತವಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮಾಸ್ಕ್ ಕಡ್ಡಾಯ ನಿಯಮ ರದ್ದುಗೊಳಿಸುವಬಗ್ಗೆ ನಿರ್ಧರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಕೊವಿಡ್ ಸೋಕು ಭಾರಿ ಇಳಿಕೆಯಾಗಿದೆ.ಜತೆಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ ಸತತವಾಗಿ ಶೂನ್ಯ ದಾಖಲಾಗುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ದಿಲ್ಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಎಲ್ಲಾ ಕೊವಿಡ್ ನಿರ್ಭಂಧಗಳು ಮತ್ತು ಮಾಸ್ಕ್ ಕಡ್ಡಾಯ ನಿಯಮವನ್ನು ರದ್ದುಗೊಳಿಸಿವೆ. ಈ ಹಿನ್ನೆಲೆ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳಲು ಮುಂದಾಗಿದೆ.