Select Your Language

Notifications

webdunia
webdunia
webdunia
webdunia

2nd ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ಡೇಟ್ ಫಿಕ್ಸ್

2nd ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ಡೇಟ್ ಫಿಕ್ಸ್
bangalore , ಶುಕ್ರವಾರ, 28 ಜುಲೈ 2023 (16:08 IST)
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂಡಳಿ ಪ್ರಕಟಣೆ ಹೊರಡಿಸಿದೆ.ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಒಂದು ಉತ್ತಮ ಅವಕಾಶ ನೀಡಲಾಗುತ್ತೆ.ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ.ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತೇರ್ಗಡೆಯಾಗಲು ಈ ಪೂರಕ ಪರೀಕ್ಷೆ ನಡೆಸಲಾಗುತ್ತೆ.ಈ ಹಿಂದೆ ಮೇ 23 ರಿಂದ ಜೂನ್ 2 ರವರೆಗೆ ನಡೆದ ಪೂರಕ ಪರೀಕ್ಷೆಗಳಲ್ಲಿ ಒಟ್ಟು 1,57,756 ವಿದ್ಯಾರ್ಥಿಗಳು ಹಾಜರಾಗಿದ್ರು.ಅವರಲ್ಲಿ, 50,478 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ರು.ಕಲಾ ವಿಭಾಗದಲ್ಲಿ ಶೇ.32.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇ.38.60ರಷ್ಟು ಉತ್ತೀರ್ಣ,ವಿಜ್ಞಾನ ಸ್ಟೀಮ್ 32.00% ರಷ್ಟು ತೇರ್ಗಡೆಯಾಗಿದ್ರು.2ನೇ ಸಲದ ಪೂರಕ ಪರೀಕ್ಷೆಯ ಘೋಷಣೆಯೊಂದಿಗೆ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಅವಕಾಶ ನೀಡಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ 3ವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ