ನಾಳೆಯೊಳಗೆ ಕಾರ್ಯಕರ್ತರಿಗೆ ಸಂತಸದ ಸುದ್ದಿ: ಎಚ್‌ಡಿ ಕುಮಾರಸ್ವಾಮಿ

Sampriya
ಸೋಮವಾರ, 25 ಮಾರ್ಚ್ 2024 (14:01 IST)
HD Kumaraswamy
ಬೆಂಗಳೂರು: ಹೃದಯದ ಯಶಸ್ವಿ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಬಂದಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯದ ವಿವಿಧ ಜಿಲ್ಲೆಗಳ ಕಾರ್ಯಕರ್ತರನ್ನು ಮನೆಯಲ್ಲಿ ಭೇಟಿಯಾದರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಎಚ್‌ಡಿಕೆ ಅವರು,  ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ 3ನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ನನ್ನನ್ನು ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ @JanataDal_S
 ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭೇಟಿಯಾಗಿ ಶುಭ ಕೋರಿದರು. ಹೆಚ್ಚು ಹೊತ್ತು ಮಾತನಾಡಬಾರದು, ಆಯಾಸ ಮಾಡಿಕೊಳ್ಳಬಾರದು ಎಂಬ ವೈದ್ಯರ ಕಟ್ಟಪ್ಪಣೆಯನ್ನು ಸ್ವಲ್ಪ ಮಟ್ಟಿಗೆ ಮೀರಿ ನನ್ನವರ ಜತೆ ಮಾತನಾಡಿದೆ.

ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದೆ.

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿ ನನ್ನ ಮೇಲೆ ಎಣೆಯಿಲ್ಲದ ಪ್ರೀತಿ, ವಾತ್ಸಲ್ಯ ತೋರಿದ ನನ್ನ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದೇನೆ ಹಾಗೂ ನಾಳೆ ಸಂಜೆಯೊಳಗೆ ನಿಮಗೆ ನಿರಾಶೆ ಆಗದಂತಹ ಒಳ್ಳೆಯ ನಿರ್ಧಾರವನ್ನು ಪಕ್ಷ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ್ದೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments