Webdunia - Bharat's app for daily news and videos

Install App

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಬುಧವಾರ, 18 ಆಗಸ್ಟ್ 2021 (09:36 IST)
ಶಿವಮೊಗ್ಗ: ಹಿಂದುಳಿದ ವರ್ಗಗಳ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನ, ಪ್ರಗತಿ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ನಮೂದಿಸುವಲ್ಲಿನ ಗೊಂದಲದ ಕುರಿತು ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 34918 ವಿದ್ಯಾರ್ಥಿಗಳಿಗೆ ಒಟ್ಟು 3.28 ಕೋಟಿ ರೂ. ವಿದ್ಯಾರ್ಥಿ ವೇತನ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 75.92 ಲಕ್ಷ ರೂ. ಬಿಡುಗಡೆಯಾಗಿದ್ದು, 7423 ವಿದ್ಯಾರ್ಥಿಗಳಿಗೆ 74.23 ಲಕ್ಷ ರೂ. ವಿದ್ಯಾರ್ಥಿ ವೇತನ ಒದಗಿಸಲಾಗಿದೆ. ಎಸ್ಎಸ್ಪಿಯಲ್ಲಿ ಸ್ವೀಕೃತವಾದ ಎಲ್ಳಾ ಅರ್ಜಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.
ಗೊಂದಲ ಸರಿಪಡಿಸಲು ಕ್ರಮ:
ಕೆಲವು ಉಪಜಾತಿಗಳು ಪರಿಶಿಷ್ಟ ಜಾತಿ ಅಥವಾ ಪಂಗಡ ಮತ್ತು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿಯೂ ಇದ್ದು, ಅಂತಹ ಜಾತಿಗಳ ಪಟ್ಟಿಯನ್ನು ಸರಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದರಿಂದಾಗಿ ಜಾತಿ ಪ್ರಮಾಣ ಪತ್ರ ನೀಡಲು ತೊಡಕುಂಟಾಗುತ್ತಿದ್ದು, ಸರಿಯಾದ ಜಾತಿ ಪ್ರಮಾಣ ಪತ್ರ ದೊರೆಯದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ.
ಎರಡು ಪಟ್ಟಿಯಲ್ಲಿರುವ 17 ಜಾತಿಗಳನ್ನು ಆಯೋಗ ಗುರುತಿಸಿದೆ. ಇದೇ ರೀತಿ ಉಪ ಜಾತಿಗಳ ಬಗ್ಗೆಯೂ ಕೆಲವು ಗೊಂದಲಗಳಿದ್ದು, ಈ ಕುರಿತು ಆಯೋಗ ಸುದೀರ್ಘವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಕೆಲವು ಸಣ್ಣ ಜಾತಿಗಳಿಗೆ ಮೀಸಲಾತಿಯಲ್ಲಿ ಸೇರಿರುವ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದಿರುವ ಕಾರಣ ಫಲಾನುಭವವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಸಮಸ್ಯೆ ಕುರಿತು ಚರ್ಚಿಸಲು ಪ್ರತ್ಯೇಕ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಮುಂದಿನ ಸುದ್ದಿ
Show comments