ಬೆಂಗಳೂರು ನಾಗರಿಕರಿಗೆ ಸಿಹಿ ಸುದ್ದಿ: ಹೊಸ ವರ್ಷಾಚರಣೆಗಾಗಿ ಮೆಟ್ರೋ ರೈಲು ಸೇವೆಯ ಅವಧಿ ವಿಸ್ತರಣೆ

Sampriya
ಶನಿವಾರ, 28 ಡಿಸೆಂಬರ್ 2024 (14:35 IST)
Photo Courtesy X
ಬೆಂಗಳೂರು: ರಾಜಧಾನಿಯ ನಾಗರಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಸಿಹಿ ಸುದ್ದಿ ನೀಡಿದೆ. 2025 ಹೊಸ ವರ್ಷಾಚರಣೆಗಾಗಿ ರೈಲು ಸೇವೆ ಅವಧಿ ವಿಸ್ತರಣೆ ಮಾಡಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು 2025ರ ಹೊಸ ವರ್ಷದ ಅಂಗವಾಗಿ ಮೆಟ್ರೋ ರೈಲು ಸೇವಾವಧಿಯನ್ನು ವಿಸ್ತರಿಸಿದೆ. ಮಧ್ಯರಾತ್ರಿ 2.40ರವರೆಗೂ ರೈಲು ಸೇವೆ ವಿಸ್ತರಿಸಿದೆ.

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜ.1 ರಂದು ಮುಂಜಾನೆ 2 ಗಂಟೆಗೆ ಎಲ್ಲ ಟರ್ಮಿನಲ್‍ನ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ(ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1 ಅಂದರೆ ಮುಂಜಾನೆ 2 ಗಂಟೆಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ರೈಲು ಕಾರ್ಯನಿರ್ವಹಿಸುತ್ತವೆ. ಆದರೆ ಎಂ.ಜಿ.ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‍ನಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಲಾಗಿದೆ.

ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ರೂ. ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೇಟ್‍ ಅನ್ನು ಬಳಸಲು ಸೂಚಿಸಲಾಗಿದೆ.

ಈ ಕಾಗದ ಟಿಕೇಟ್‍ ಅನ್ನು ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಡಿಸೆಂಬರ್ 31ರ ಬೆಳಗ್ಗೆ 8 ಗಂಟೆಯಿಂದ ಮುಂಗಡವಾಗಿ ಖರೀದಿಸಬಹುದಾಗಿದೆ. ಅಂತೆಯೇ ಸಾಮಾನ್ಯ ಕ್ಯೂಆರ್ ಕೋಡ್ ಟಿಕೆಟ್ ಮತ್ತು ಕಾರ್ಡ್‍ಗಳಿಂದ ಈ ನಿಲ್ದಾಣಗಳಿಂದ ಪ್ರಯಾಣಿಸಲು ಮಾನ್ಯವಾಗಿರುತ್ತವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments