Select Your Language

Notifications

webdunia
webdunia
webdunia
webdunia

ಹಬ್ಬದ ಪ್ರಯುಕ್ತ ಬೆಂಗಳೂರು, ಮಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್

Railways

Krishnaveni K

ಬೆಂಗಳೂರು , ಸೋಮವಾರ, 23 ಡಿಸೆಂಬರ್ 2024 (10:48 IST)
ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಊರಿಗೆ ಹೊರಡುವ ಪ್ರಯಾಣಿಕರಿಗೆ ರೈಲ್ವೇ ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರು-ಕಲಬುರಗಿ, ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ವಿಶೇಷ ಟ್ರೈನ್ ಓಡಾಡಲಿದೆ.

ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕರಾವಳಿ ಭಾಗ ಮತ್ತು ಉತ್ತರ ಕರ್ನಾಟಕದ ಭಾಗಕ್ಕೆ ರಾಜ್ಯ ರಾಜಧಾನಿಯಿಂದ ಸಾಕಷ್ಟು ಜನ ಊರುಗಳಿಗೆ ತೆರಳುತ್ತಿದ್ದಾರೆ. ಹೀಗಾಗಿ ವಿಶೇಷ ಟ್ರೈನ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೇ ಪ್ರಕಟಣೆ ನೀಡಿದೆ.

ರೈಲು ಸಂಖ್ಯೆ 06533 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ರೈಲು ಡಿಸೆಂಬರ್ 24 ರಂದು ರಾತ್ರಿ 9.15 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.40 ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06590 ಕಲಬುರಗಿಯಿಂದ ಡಿಸೆಂಬರ್ 25 ಕ್ಕೆ ಬೆಳಿಗ್ಗೆ 9.34 ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ತಲುಪಲಿದೆ.

ಯಶವಂತಪುರ-ಮಂಗಳೂರು ರೈಲು
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ನಡುವೆ ಓಡಾಡಲಿರುವ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 11.45 ಕ್ಕೆ ಮಂಗಳೂರು ತಲುಪಲಿದೆ. ರೈಲು ಸಂಖ್ಯೆ 06506 ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಂದ ಮಧ್ಯಾಹ್ನ 1.00 ಗಂಟೆಗೆ ಹೊರಟು ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರಕ್ಕೆ ತಲುಪಲಿದೆ. ಈ ರೈಲುಗಳ ಬಗ್ಗೆ ರೈಲ್ವೇ ಸಹಾಯವಾಣಿ 139 ಕ್ಕೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

Narayana Murthy: ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಲಿದೆ: ನಾರಾಯಣ ಮೂರ್ತಿ ಆತಂಕ