Publish Date: Thu, 10 Mar 2022 (21:08 IST)
Updated Date: Thu, 10 Mar 2022 (21:11 IST)
54 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.
10 ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಮತ್ತು ಡಿಪ್ಲೊಮಾ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1ಲಕ್ಷದವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.04.2022 ಆಗಿದ್ದು, ಆನ್‌ಲೈನ್/ಚಲನ್ ಮೂಲಕ ಶುಲ್ಕ ಪಾವತಿಯ ಕೊನೆಯ ದಿನಾಂಕ 12/04/2022 ಆಗಿದೆ. ಸಹಾಯಕ ನ್ಯಾಯಾಲಯದ ಕಾರ್ಯದರ್ಶಿ (ಸ್ಟೆನೋಗ್ರಾಫರ್) 54 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು - ಕರ್ನಾಟಕದಲ್ಲಿ ಕೆಲಸ ನೀಡಲಾಗುತ್ತದೆ.ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.44,900 - 1,42,400 ವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು http://karnatakajudiciary.kar.nic.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗೆ ಭೇಟಿ ನೀಡಬಹುದು.