Select Your Language

Notifications

webdunia
webdunia
webdunia
webdunia

ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಬೆಂಗಳೂರು , ಭಾನುವಾರ, 18 ಸೆಪ್ಟಂಬರ್ 2022 (16:13 IST)
ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, 94 ಎ ತಿದ್ದುಪಡಿ ಮೂಲಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ಭೂಮಿಯಲ್ಲಿ ನಡೆಸುತ್ತಿರುವ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿದೆ. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಬರುತ್ತಿದ್ದ ಬಸ್ ಅಪಘಾತ