Select Your Language

Notifications

webdunia
webdunia
webdunia
webdunia

ರೈತರಿಗೆ ಸರ್ಕಾರದಿಂದ ಗುಡ್​ನ್ಯೂಸ್​

ರೈತರಿಗೆ ಸರ್ಕಾರದಿಂದ ಗುಡ್​ನ್ಯೂಸ್​
bangalore , ಭಾನುವಾರ, 22 ಅಕ್ಟೋಬರ್ 2023 (13:20 IST)
ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯ ಭೂಮಾಲೀಕರು ಇನ್ನು ಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ರೈತರಿಂದ ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಮಾಡಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಸಾರ್ವಜನಿಕರಿಂದ ಮನವಿ/ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಜಾದ ಅಲ್-ಅನ್ಸಾರ್ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ