ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Sampriya
ಬುಧವಾರ, 12 ನವೆಂಬರ್ 2025 (20:40 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. 2 ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ.  ಸರ್ಕಾರಿ ಮತ್ತು ಖಾಸಗಿ ವಲಯಗಳೆರಡರಲ್ಲೂ ಕೆಲಸ ಮಾಡುವ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಈ ರಜೆ ಅನ್ವಯಿಸಲಿದೆ.

ಷರತ್ತುಗಳು: ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. 18 ವರ್ಷದಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳಾ ನೌಕರರಿಗೆ ಕಡ್ಡಾಯ ರಜೆ ನೀಡಬೇಕು.

ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಮುಂದಿನ ಸುದ್ದಿ
Show comments