ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಂಕ್ರಾಂತಿ ಹೊಸ್ತಿಲಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಅದೇನು ಇಲ್ಲಿ ನೋಡಿ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಸರ್ಕಾರ ಪ್ರತೀ ತಿಂಗಳು 2,000 ರೂ. ಜಮೆ ಮಾಡುತ್ತದೆ. ಇದುವರೆಗೆ ಒಟ್ಟು 15 ಕಂತಿನ ಹಣ ಜಮೆಯಾಗಿದೆ. ಇನ್ನೀಗ 16 ನೇ ಕಂತಿನ ಹಣ ಬಿಡುಗಡೆಯಾಗಬೇಕಿದೆ.
ಇನ್ನೇನು ಸಂಕ್ರಾಂತಿ ಹಬ್ಬ ಬರುತ್ತಿದ್ದು ಇದರ ಬೆನ್ನಲ್ಲೇ ಸರ್ಕಾರ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದೆ. ಸಂಕ್ರಾಂತಿ ಸಂದರ್ಭದಲ್ಲಿ ಅಂದರೆ ಜನವರಿ 14 ರಂದು ಎಲ್ಲಾ ಫಲಾನುಭವಿಗಳ ಖಾತೆಗೆ 16 ನೇ ಕಂತಿನ ಬಾಬ್ತು 2,000 ರೂ. ಜಮೆ ಆಗಲಿದೆ ಎಂದು ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ ತಿಳಿಸಿದ್ದಾರೆ.
ಹೀಗಾಗಿ ಸಂಕ್ರಾಂತಿಗೆ ಹಬ್ಬ ಮಾಡಲು ಸರ್ಕಾರದ ವತಿಯಿಂದ ಹಣ ಸಂದಾಯವಾಗಲಿದೆ. 14 ನೇ ತಾರೀಖಿನಿಂದ ಹಣ ಜಮಾವಣೆಯಾಗಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ಹೇಳಿದ್ದರು. ಹೀಗಾಗಿ ಜನವರಿ 14 ರಂದು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿ.