Select Your Language

Notifications

webdunia
webdunia
webdunia
webdunia

ಮನೆ ಯಜಮಾನಿಯರಿಗೆ ಗುಡ್‌ನ್ಯೂಸ್: ಗೃಹಲಕ್ಷ್ಮೀ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ಹೆಬ್ಬಾಳ್ಕರ್

ಮನೆ ಯಜಮಾನಿಯರಿಗೆ ಗುಡ್‌ನ್ಯೂಸ್: ಗೃಹಲಕ್ಷ್ಮೀ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ಹೆಬ್ಬಾಳ್ಕರ್

Sampriya

ಬೆಂಗಳೂರು , ಭಾನುವಾರ, 30 ಜೂನ್ 2024 (14:02 IST)
Photo Courtesy X
ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೇವೆ. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದು, ರಾಜ್ಯದಾದ್ಯಂತ ಇಂದು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟಣೆ ನೀಡಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಗೃಹಲಕ್ಷ್ಮಿ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದರು.

ಯಾವುದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿ ನಾಯಕರಿಗೆ ಮಾತನಾಡಲು ಬೇರೆ ವಿಷಯವಿಲ್ಲದೆ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ 40 ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನ ಐದು ವರ್ಷದ ಅಧಿಕಾರದ ಅವಧಿಯಲ್ಲಿ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಪ್ರತಿ ಮಹಿಳೆಯರ ಖಾತೆಗೆ ಜಮೆ ಆಗುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಏನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ ಎಂದು ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೇ ಬಾರಿ ಪ್ರಧಾನಿ ಗಾದಿಗೆ ಏರಿದ ಮೋದಿಯಿಂದ ಮೊದಲ 'ಮನ್‌ ಕಿ ಬಾತ್' ಇಂದು