ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೂಡಲೇ ಅರ್ಜಿ ಸಲ್ಲಿಸಿ

Webdunia
ಮಂಗಳವಾರ, 9 ಜೂನ್ 2020 (15:29 IST)
ಉದ್ಯೋಗಾಕಾಂಕ್ಷಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿರುವ ಪೋಷಣ್ ಅಭಿಯಾನ ಯೋಜನೆಯಡಿ ಹೊಳೆನರಸೀಪುರ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸಲು ತಾಲ್ಲೂಕು ಸಂಯೋಜಕರ ಹುದ್ದೆಗಳಿಗೆ  ಈಗಾಗಲೇ ಎರಡು ಬಾರಿ ಅರ್ಜಿ ಆಹ್ವಾನಿಸಲಾಗಿದ್ದು, ತಾಲ್ಲೂಕಿನಿಂದ ಅರ್ಜಿ ಬಾರದಿರುವ ಕಾರಣ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ.

ಸದರಿ ತಾಲ್ಲೂಕಿನಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬಾರದಿದ್ದರೆ ಬೇರೆ ತಾಲ್ಲೂಕಿನ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಐ.ಟಿ ಪದವಿ ಅಥವಾ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್  ಪದವಿ ಪಡೆದಿರಬೇಕು. ಸೇವಾ ಅನುಭವ ಟೆಕ್ನಾಲಜಿ ಅಂಡ್ ಸಾಫ್ಟ್‍ವೇರ್ ಅಪ್ಲಿಕೇಷನ್ ಸಪೋರ್ಟ್‍ನಲ್ಲಿ ಕನಿಷ್ಟ 2 ವರ್ಷಗಳು ಕೆಲಸ ನಿರ್ವಹಿಸಿದ ಅನುಭವ ಇರಬೇಕು.  ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.  ಕ್ಷೇತ್ರ ಕಾರ್ಯ ನಿರ್ವಹಿಸಲು ಸಿದ್ದರಿರಬೇಕು. ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು. ಅರ್ಜಿ ಸಲ್ಲಿಸಲು ಜೂನ್ 15 ಸಂಜೆ 5 ಗಂಟೆ ಗಂಟೆಯೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆ.ಆರ್.ಪುರ 9ಕ್ರಾಸ್, ಹಾಸನ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ದೂ. ಸಂ: 08172-267218, 235133 ಗೆ ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಕಾಸರೋಗೋಡು ತೆಯ್ಯಂ ಹೊಡೆತಕ್ಕೆ ಯುವಕನ ಸ್ಥಿತಿ ಏನಾಯ್ತು: ಭಯಾನಕ ವಿಡಿಯೋ ನೋಡಿ

Karnataka Weather: ವಿಪರೀತ ಚಳಿಯಿಂದ ನಡುಗುತ್ತಿದ್ದರೆ ಇಂದು ಗುಡ್ ನ್ಯೂಸ್

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮುಂದಿನ ಸುದ್ದಿ
Show comments