Publish Date: Thu, 09 Jul 2026 (10:40 IST)
Updated Date: Thu, 09 Jul 2026 (10:42 IST)
ಬೆಂಗಳೂರು: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿ ಒಂದು ತಿಂಗಳಾದರೂ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಸಚಿವಾಕಾಂಕ್ಷಿಗಳಿಗೆ ಈಗ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ.
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೇ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತಮ್ಮ ಬೆಂಬಲಿಗರ ಮೂಲಕ ಪ್ರತಿಭಟನೆ, ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಇನ್ನು ಕೆಲವರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಮನವೊಲಿಸುವ ಪ್ರಯತ್ನ ಮಾಡಿದ್ದರು.
ಆದರೆ ಸದ್ಯಕ್ಕೆ ಯಾವುದೂ ಆಗಲ್ಲ ಎಂದು ಸಂದೇಶ ರವಾನೆಯಾಗಿತ್ತು. ಇದಕ್ಕೆ ಕಾರಣ ರಾಹುಲ್ ಗಾಂಧಿ ವಿದೇಶ ಪ್ರವಾಸ. ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ವಾಪಸ್ ಬರುವವರೆಗೂ ಸಚಿವ ಸ್ಥಾನ ಹಂಚಿಕೆ ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶ ಬಂದಿದೆ.
ಹೀಗಾಗಿ ಇಷ್ಟು ದಿನ ಶಾಸಕರು ಸುಮ್ಮನಿದ್ದರು. ಇದೀಗ ರಾಹುಲ್ ಗಾಂಧಿ ಜುಲೈ 12 ಕ್ಕೆ ಭಾರತಕ್ಕೆ ಮರಳುವುದು ಫಿಕ್ಸ್ ಆಗಿದೆ. ನಾಡಿದ್ದು ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು ಸಚಿವ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನೀಡುವ ಪಟ್ಟಿಯೇ ಅಂತಿಮವಾಗಲಿದೆ. ಆದರೆ ಕೊನೆಗೂ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ, ನಮಗೂ ಸಚಿವ ಸ್ಥಾನ ಸಿಗಬಹುದು ಎಂಬ ಖುಷಿಯಲ್ಲಿದ್ದಾರೆ ಶಾಸಕರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ