Publish Date: Thu, 18 Nov 2021 (15:40 IST)
Updated Date: Thu, 18 Nov 2021 (15:43 IST)
ದ್ವಿತೀಯ ಪಿಯುಸಿಯ ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಯನ್ನು ಮುಂಡೂಡಲಾಗಿದೆ.
ನ. 29ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡಲಾಗಿದೆ. ಹೀಗಾಗಿ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.ಕಾಲೇಜು ಮಟ್ಟದಲ್ಲಿ ಮೌಲ್ಯಮಾಪನಕ್ಕೆ ಒಪ್ಪಿಗೆ ನೀಡುವ ಸಾಧ್ಯತೆಯೂ ಇದೆ.
ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಉಪನ್ಯಾಸಕರು ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ. ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಹೇಳಲಾಗಿದೆ.