ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 166 ಸಜಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಮುಂಬರಲಿರುವ ಆ. 15 ಸ್ವಾತಂತ್ರ್ಯ ದಿನಾಚರಣೆಗೆ ಈ ಸನ್ನಡತೆ ಕೈದಿಗಳು ಬಿಡುಗಡೆಯಾಗಲಿದ್ದಾರೆ.
ವಿಷಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧಾನಸಭೆಯಲ್ಲಿ ಪ್ರಕಟಿಸಿದರು. ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಪೈಕಿ ಸನ್ನಡತೆ ಆಧಾರದ ಮೇಲೆ 166 ಕೈದಿಗಳನ್ನು ಬಿಡುಗಡೆ ಮಾಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದರು.
ಕೊಲೆ, ಸೇರಿದಂತೆ ಘೋರ ಅಪರಾಧ ಪ್ರಕರಣಳಲ್ಲಿ ಶಿಕ್ಷೆಗೆ ಗುರಿಯಾಗುವ ಕೈದಿಗಳು ಸನ್ನತಡೆ ತೋರಿದರೆ ಅವರನ್ನು ಅವಧಿ ಪೂರ್ವ ಬಿಡುಗಡೆ ಮಾಡಲು ಅವಕಾಶವಿದೆ. 2006-07 ರಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಿಸಿದ್ದರು. ಆ ಬಳಿಕ ಜೈಲಿನಲ್ಲಿ ಹಲವು ಅಕ್ರಮಗಳು ಕಂಡು ಬಂದ ಬಳಿಕ ಹಲವು ವರ್ಷ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಅವಕಾಶ ಸಿಕ್ಕಿರಲಿಲ್ಲ.
[16:48, 3/11/2022] Geethanjali: ಅದಾದ ಬಳಿಕ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದ್ದು, 2021 ರಲ್ಲಿ 103 ಸಜಾ ಬಂಧಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಸನ್ನತಡೆ ಆಧಾರದ ಮೇಲೆ ಬಿಡುಗಡೆ ಸಂಬಂಧ ಸುಪ್ರಿಂ ಕೋರ್ಟ್ ಮಾರ್ಗಸೂಚಿ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕೆಲ ಸನ್ನಡತೆ ಕೈದಿಗಳ ಬಿಡುಗಡೆ ಆಗಿರಲಿಲ್ಲ. ಹೀಗಗಿ ಬಾಕಿ ಉಳಿದಿದ್ದ 89 ಸನ್ನಡತೆ ಸಜಾ ಬಂಧಿಗಳು ಹಾಗೂ 2021 ಜುಲೈನಲ್ಲಿ ನಡೆದ ಸ್ಥಾಯಿ ಸಲಹಾ ಮಂಡಳಿಯ ಸಮಿತಿ ಪರಿಶೀಲನೆ ಬಳಿಕ ಒಟ್ಟು 166 ಸನ್ನಡತೆ ಸಜಾ ಬಂಧಿಗಳನ್ನು ಬಿಡುಗಡೆ ಮಾಡಲು ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಈ ಪ್ರಸ್ತಾವಕ್ಕೆ ಸಹಿ ಹಾಕಿದ್ದು, ಪ್ರಸಕ್ತ ಸಾಲಿನಲ್ಲಿ 166 ಸನ್ನಡತೆ ಕೈದಿಗಳು ಬಿಡುಗೆಡಯಾಗಲಿದ್ದಾರೆ.
ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವ ಅಧಿಕಾರವನ್ನು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನೀಡಲಾಗಿದೆ. ಅದರಂತೆ ಬಿಡುಗಡೆ ಮಾಡುತ್ತಿದ್ದು, ಇದೀಗ ಸನ್ನಡತೆ ಆಧಾರದ ಮೇಲೆ 166 ಸನ್ನಡತೆ ಕೈದಿಗಳು ಶಿಕ್ಷಾ ಅವಧಿ ಪೂರೈಸುವ ಮೊದಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.