ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.
21-22ನೇ ಸಾಲಿನ ಎಸ್ಎಸ್ಎಲ್ಸಿ(SSLC) ಪರೀಕ್ಷೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿದ್ದು, ಪರೀಕ್ಷೆ(Exam) ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಪ್ರಯಾಣದ ಸಂದರ್ಭದಲ್ಲಿ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು. ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.