Webdunia - Bharat's app for daily news and videos

Install App

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

Webdunia
ಶುಕ್ರವಾರ, 13 ಮೇ 2022 (13:15 IST)
ಬೆಂಗಳೂರು: ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೂ ಸಿಕ್ಕಿದೆ.
 
ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟುಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಿಕ್ಷ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.
 
2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟುವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್‌ ಅಂಕ ನೀಡಲಾಗುತ್ತಿದೆ. ಬಹುಶಃ ಈ ಬಾರಿಯೂ ಗ್ರೇಸ್‌ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
 
ಅಧಿಕಾರಿಗಳು ಹೇಳುವ ಪ್ರಕಾರ ಗ್ರೇಸ್‌ ಅಂಕ ನೀಡಿಕೆ ಹೊಸದೇನಲ್ಲ, ನಿಯಮಾವಳಿಯಲ್ಲೇ ಇದಕ್ಕೆ ಮೊದಲಿಂದಲೂ ಅವಕಾಶವಿದೆ. ಫಲಿತಾಂಶ ಉತ್ತಮಗೊಳಿಸುವ ಕಾರಣದಿಂದ ಗರಿಷ್ಠ ಮೂರು ವಿಷಯಗಳಿಗೆ ಶೇ.5ರಷ್ಟುಗ್ರೇಸ್‌ ಅಂಕ ನೀಡುವ ಮಾನದಂಡ ಅನುಸರಿಸಿಕೊಂಡು ಬರಲಾಗುತ್ತಿದೆ. ಆದರೆ, ಕೋವಿಡ್‌ನಿಂದ ಶಾಲೆಗಳು ಆರಂಭವಾಗದೆ ಮಕ್ಕಳಿಗೆ ಭೌತಿಕ ತರಗತಿಗಳು ನಡೆಯದೆ ಕಲಿಕೆಯಲ್ಲಿ ಹಿಂದುಳಿದ ಕಾರಣ 2021ರಲ್ಲಿ ಮಂಡಳಿಯು ಇದನ್ನು ಶೇ.10ಕ್ಕೆ ಹೆಚ್ಚಿಸಿತ್ತು.
 
2021ರ ವಾರ್ಷಿಕ ಪರೀಕ್ಷೆಯನ್ನು ಎರಡೇ ದಿನದಲ್ಲಿ ಮುಗಿಸಿ ಸಾಮೂಹಿಕವಾಗಿ ಎಲ್ಲರನ್ನೂ ಪಾಸ್‌ ಮಾಡಿದ್ದರಿಂದ ಆಗ ಗ್ರೇಸ್‌ ಅಂಕದ ಪ್ರಶ್ನೆ ಉದ್ಭವಿಸಿರಲಿಲ್ಲ. ಆದರೆ, ನಂತರ ನಡೆದ ಪೂರಕ ಪರೀಕ್ಷೆಯಲ್ಲಿ ಶೇ.10 ಗ್ರೇಸ್‌ ಅಂಕಗಳನ್ನು ನೀಡಲಾಗಿತ್ತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments