Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
bangalore , ಸೋಮವಾರ, 17 ಜುಲೈ 2023 (15:52 IST)
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.2 ಜೊತೆ `ಉಚಿತ ಸಮವಸ್ತ್ರ' ವಿತರಣೆಗೆ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರವು 1-10 ನೇ ತರಗತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2ನೇ ಜೊತೆ ಉಚಿತ ಸಮವಸ್ತ್ರ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
 
2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 44.79 ಲಕ್ಷ ವಿದ್ಯಾರ್ಥಿಗಳಿಗೆ 2 ನೇಯ ಜೊತೆ ಸಮವಸ್ತ್ರವನ್ನು ಒಟ್ಟು ರೂ.73.66 ಕೋಟಿ ರೂ.ವೆಚ್ಚದಲ್ಲಿ ನಿಯಮಾನುಸಾರ ಸ್ಪರ್ಧಾತ್ಮಕ ಟೆಂಡರ್ ಪ್ರಕ್ರಿಯ ಮೂಲಕ ಖರೀದಿಸಿ ಸರಬರಾಜು ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.ಸದರಿ ಅನುದಾನವನ್ನು ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರ ಎಸ್.ಎನ್.ಎ. ಖಾತೆಯಲ್ಲಿ (SNA Account) ಲಭ್ಯವಿರುವ ಅನುದಾನದಿಂದ ಭರಿಸಲು ಕ್ರಮವಹಿಸತಕ್ಕದ್ದು.ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸ್ಪರ್ಧಾತ್ಮಕ ಟೆಂಡರ್ ಪುಕ್ರಿಯೆ ಮುಖಾಂತರವಾಗಿ ಹೊರಹೊಮ್ಮಿದ ಕನಿಷ್ಕೃತಮ ದರಗಳಲ್ಲಿ 30 ದಿವಸಗಳ ಸ್ಪರ್ಧಾತ್ಮಕ ಟೆಂಡರ್ ಮೂಲಕ ಖರೀದಿಸಿ, ಸರಬರಾಜು ಮಾಡುವುದು ಹಾಗೂ ಸಮವಸ್ತ್ರದ ಬಟ್ಟೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ಎಚ್ಚರವಹಿಸತಕ್ಕದ್ದು,ಸದರಿ ಕಾರ್ಯಕ್ರಮಕ್ಕಾಗಿ ಅನುಮೋದನೆ ನೀಡಲಾಗಿರುವ ಒಟ್ಟು ರೂ.73.65 ಕೋಟಿ ಅನುದಾನ ಒದಗಿಸಲಾಗಿದ್ದು,ಸದರಿ ಅನುದಾನದ ಮಿತಿಯೊಳಗೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆಯನ್ನು ಜುಲೈ 31ರವರೆಗೆ ವಿಸ್ತರಿಸಿದ BMTC