Webdunia - Bharat's app for daily news and videos

Install App

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಮಂಗಳವಾರ, 28 ಸೆಪ್ಟಂಬರ್ 2021 (11:10 IST)
ಬೆಂಗಳೂರು :  ಅಕ್ಟೋಬರ್ 1ರಿಂದ ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳ ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಆರಂಭಗೊಳ್ಳಲಿವೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆಯನ್ನು ಪುನರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
Photo Courtesy: Google

ಈ ಮೂಲಕ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಹೊರಟಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮದಿಂದಾಗಿ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಕೊರೋನಾ ಇಳಿಕೆಯಿಂದಾಗಿ ಮತ್ತೆ ಶಾಲಾ-ಕಾಲೇಜುಗಳನ್ನು ಆರಂಭವಾಗದ ಕಾರಣ ಬಿಸಿಯೂಟದ ಆಹಾರಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿತ್ತು. ಇದೀಗ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳಿಗಾಗಿ ಮತ್ತೆ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸೋದಕ್ಕೆ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಈ ವೇಳೆ ಮಕ್ಕಳು ತಾವು ಮನೆಯಿಂದ ಊಟ ತರ್ತಾ ಇರೋದಾಗಿ ತಿಳಿಸಿದ್ದಾರೆ. ಈ ಮಕ್ಕಳಿಗೆ ಅನುಕೂಲ ಆಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಯೋಜನೆ ಆರಂಭಿಸೋ ಚಿಂತನೆ ನಡೆಸಲಾಗಿದೆ ಎಂದರು.
ಅಂದಹಾಗೇ ಅಕ್ಟೋಬರ್ 1ರಿಂದ ಇದುವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿ ನಿಯಮ ಬದಲಾಗಲಿದೆ. ಶೇ.100ರಷ್ಟು ವಿದ್ಯಾರ್ಥಿಗಳ ಹಾಜರಿಗೆ ಸರ್ಕಾರ ಅನುಮತಿಸಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಶೀಘ್ರವೇ ಪುನರಾರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments