Webdunia - Bharat's app for daily news and videos

Install App

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಂದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ!

Webdunia
ಸೋಮವಾರ, 25 ಜೂನ್ 2018 (15:09 IST)
ಬೆಂಗಳೂರು : ಹಿಂದಿನ ಸಿದ್ದರಾಮಯ್ಯ ಸರ್ಕಾರ ಘೋಷಿಸಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಸಿಗಲಿದೆ ಎಂದು ಹೇಳುವುದರ ಮೂಲಕ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.


ಕಾಲೇಜು ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸರ್ಕಾರ ಲ್ಯಾಪ್ ಟಾಪ್ ವಿತರಣೆಗೆ ನೀಡಿದ್ದ ಅನುದಾನ ವಾಪಸ್ ಪಡೆದಿಲ್ಲ. ಕಳೆದ ವರ್ಷ ಪರಿಶಿಷ್ಟ ವಿದ್ಯಾರ್ಥಿಗಳಿಗಷ್ಟೇ ಲ್ಯಾಪ್ ಟಾಪ್ ವಿತರಿಸಲಾಗಿದ್ದು, ಆಗ ಬಿಎ, ಬಿಕಾಂ, ಬಿಎಸ್ಸಿ, ಎಂಜಿನಿಯರಿಂಗ್, ವೈದ್ಯ ಕೋರ್ಸ್ ನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಸರ್ಕಾರ ಘೋಷಿಸಿತ್ತು’ ಎಂದು ತಿಳಿಸಿದ್ದಾರೆ.


ಹಾಗೇ ಮೈಸೂರು, ಮಂಗಳೂರು, ಜಾನಪದ ಸೇರಿದಂತೆ ಕೆಲವು ವಿವಿಗಳಲ್ಲಿ ಖಾಲಿ ಇರುವ ಕುಲಪತಿಗಳ ಹುದ್ದೆ ಭರ್ತಿ ಬಗ್ಗೆ ಬಜೆಟ್ ಅಧಿವೇಶನದ ನಂತರ ಸಿಎಂ ಜೊತೆ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments