Select Your Language

Notifications

webdunia
webdunia
webdunia
webdunia

ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Good news for the students who did not get a chance for the exam due to lack of attendance
bangalore , ಗುರುವಾರ, 25 ಮೇ 2023 (20:51 IST)
ಬೆಂಗಳೂರು ಸೇರಿ ರಾಜ್ಯದಲ್ಲಿ ಹಾಜರಾತಿ ಕೊರತೆ ಇದ್ದ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಹಾಜರಾತಿ ಕೊರತೆಯಿದ್ದ ಪರೀಕ್ಷೆಯಿಂದ ವಂಚಿತರಾಗಿದ್ದ 26 ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡು ಪೂರಕ ಪರೀಕ್ಷೆ ಬರೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ನೀಡಿದೆ.ಈ ಬಾರಿ 26,900 ವಿದ್ಯಾರ್ಥಿಗಳು ನಿಗದಿತ ಹಾಜರಾತಿ ಇಲ್ಲದೆ ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಮುಖ್ಯ ಪರೀಕ್ಷೆಗೆ ಹಾಜರಾಗಲಾಗದೆ ವಂಚಿತರಾಗಿದ್ದರು. ಆ ಎಲ್ಲ ವಿದ್ಯಾರ್ಥಿಗಳು ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಈಗಲೇ ಪರೀಕ್ಷೆ ಬರೆದರೆ ಉತ್ತೀರ್ಣರಾಗುವ ಅವಕಾಶ ಹೆಚ್ಚಿರುತ್ತದೆ. ಹಾಗಾಗಿ ಅಂತಹ ಎಲ್ಲ ಮಕ್ಕಳಿಗೆ ಮೇ 26ರ ವರೆಗೆ ಖಾಸಗಿ ಅಭ್ಯರ್ಥಿಗಳಾಗಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಅಧಿಕಾರ ಹಂಚಿಕೆ ಆಗಿದ್ಯಾ..?