Publish Date: Sat, 13 Jan 2024 (15:00 IST)
Updated Date: Sat, 13 Jan 2024 (13:51 IST)
ಬೆಂಗಳೂರು-ಬೆಂಗಳೂರಿನಲ್ಲಿ ಜನವರಿ 17ರಂದು ಇಂಡಿಯಾ ಹಾಗೂ ಅಪ್ಘಾನಿಸ್ತಾನ ಟಿ-20 ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.ಹೀಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಮ್ಯಾಚ್ ಮುಗಿದ ನಂತರ ಕ್ರೀಡಾಂಗಣದಿಂದ ನಗರದ ವಿವಿಧ ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿದೆ.
ಚಿನ್ನಸ್ವಾಮಿಯಿಂದ ನಗರದ 12 ಭಾಗಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ,ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ,ಕೆಂಗೇರಿ ,ನೆಲಮಂಗಲ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಷಿನ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.