ರೈತರು ಹಾಗೂ ಬೆಳೆಗಾರರಿಗೆ ಕೇಂದ್ರ ಸರಕಾರದಿಂದ ಈ ವರ್ಷವೂ ಗುಡ್ ನ್ಯೂಸ್ ಸಿಕ್ಕಿದೆ.
ಜೂನ್ 1 ರಂದು ಜರುಗಿದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮುಂಗಾರು ಹಂಗಾಮಿನ 14 ಕೃಷಿ ಉತ್ಪನ್ನಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ.
ಕೃಷಿ ಮತ್ತು ಕೃಷಿಗೆ ಸಂಬಂಧಪಟ್ಟ 3 ಲಕ್ಷ ರೂಪಾಯಿವರೆಗಿನ ಅಲ್ಪಾವಧಿ ಕೃಷಿ ಸಾಲದ ಮರು ಪಾವತಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ದುಡಿಯುವ ಬಂಡವಾಳಕ್ಕೆ ಸಾಲ ನೀಡುವ ಸ್ವನಿಧಿ ಸಾಲ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ ಸಕಾಲದ ಮರು ಪಾವತಿ ಮಾಡುವ ವ್ಯಾಪಾರಿಗಳಿಗೆ 7% ರಷ್ಟು ಸಬ್ಸಿಡಿ ದೊರೆಯಲಿದೆ. ಸುಮಾರು 50 ಲಕ್ಷ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಲಿದ್ದಾರೆ ಎಂದು ಬಿಜೆಪಿ ಸಂಸದ ಶಿವಕುಮಾರ ಉದಾಸಿ ತಿಳಿಸಿದ್ದಾರೆ.