ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ದಿನದಂದೇ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಆದೇಶವನ್ನು ಹೊರಡಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದೆ.
ಅದಲ್ಲದೆ ಆದೇಶದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದೆ.
ಕಳೆದ ವರ್ಷ ಕಲಬುರಗಿಯಲ್ಲಿ ಸೆ.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿದೆ.