ಕಲ್ಯಾಣ ಕರ್ನಾಟಕದ ದಿನದಂದೇ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ‌ಗುಡ್ ನ್ಯೂಸ್

Sampriya
ಬುಧವಾರ, 17 ಸೆಪ್ಟಂಬರ್ 2025 (20:09 IST)
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ದಿನದಂದೇ ರಾಜ್ಯ ಕಾಂಗ್ರೆಸ್ ಸರ್ಕಾರ  ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಆದೇಶವನ್ನು ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದೆ. 

ಅದಲ್ಲದೆ ಆದೇಶದಲ್ಲಿ‌ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದೆ.

ಕಳೆದ ವರ್ಷ ಕಲಬುರಗಿಯಲ್ಲಿ ಸೆ.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ,  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments