Select Your Language

Notifications

webdunia
webdunia
webdunia
webdunia

ಸರ್ಕಾರದಿಂದ ಗುಡ್ ನ್ಯೂಸ್: ಸರ್ಕಾರೀ ಶಾಲಾ ಮಕ್ಕಳಿಗೆ ಉಚಿತ ಸಾರಿಗೆ ಭಾಗ್ಯ

Karnataka free bus

Krishnaveni K

ಬೆಂಗಳೂರು , ಶುಕ್ರವಾರ, 11 ಜುಲೈ 2025 (09:01 IST)
ಬೆಂಗಳೂರು: ಸರ್ಕಾರೀ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವ ನಿಟ್ಟಿನಿಂದ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ನೀಡುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.

ಎಲ್ ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಮಕ್ಕಳು ಈ ಉಚಿತ ಸಾರಿಗೆಯ ಸದುಪಯೋಗಪಡಿಸಿಕೊಳ್ಳಬಹುದು ಎಂದು ಸರ್ಕಾರ ಘೋಷಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಮಾಡಿಕೊಡಲು ಈ ಯೋಜನೆ ಘೋಷಿಸಲಾಗಿದೆ.

ಬಡವರ ಮಕ್ಕಳು, ಹಳ್ಳಿಗಳ ಮಕ್ಕಳಿಗೆ ಶಾಲೆಗೆ ಹೋಗಲು ಈ ಯೋಜನೆಯಿಂದ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ ಮಾಡಿ ಎಂದು ಹಲವು ಬಾರಿ ವಿದ್ಯಾರ್ಥಿಗಳೇ ಸಿಎಂ, ಡಿಸಿಎಂಗೆ ಬೇಡಿಕೆಯಿಟ್ಟಿದ್ದರು. ಇದೀಗ ಸರ್ಕಾರ ಕೊನೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದೆ.

ಸರ್ಕಾರೀ ಶಾಲೆಗಳ ಸಬಲೀಕರಣಕ್ಕೆ ಇದೊಂದು ದಿಟ್ಟ ಹೆಜ್ಜೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Rains: ನೈಋತ್ಯ ಮುಂಗಾರು ಚುರುಕು: ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಜೋರು