Webdunia - Bharat's app for daily news and videos

Install App

ದೀಪಾವಳಿ ಹಬ್ಬ ಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್

Webdunia
ಭಾನುವಾರ, 5 ನವೆಂಬರ್ 2023 (15:44 IST)
ದೀಪಾವಳಿ ಹಬ್ಬದ ಅಂಗವಾಗಿ KSRTC ಯಿಂದ ಹೆಚ್ಚುವರಿ 2000 ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ.ಪ್ರಯಾಣಿಕರ ಅನಕೂಲಕ್ಕಾಗಿ ಬೆಂಗಳೂರಿನಿಂದ ಎಲ್ಲಾ ಜಿಲ್ಲೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ನ.10ರಿಂದ ಎರಡು ಸಾವಿರ ಹೆಚ್ಚುವರಿ ಬಸ್ ಗಳ ಸಂಚರೀಸಲಿವೆ.ಕಳೆದವಾರ ದಸರಾ ಹಿನ್ನೆಲೆ ಹೆಚ್ಚುವರಿ ಬಸ್ ಗಳನ್ನ ಬಿಡಲಾಗಿತ್ತು.ಅದರಿಂದ ಸಾರಿಗೆ ಇಲಾಖೆಗೆ ಕೋಟಿ ಕೋಟಿ ಆದಾಯ ಹರಿದು ಬಂದಿತ್ತು.ಇದೀಗ ಮತ್ತೆ ಹಬ್ಬಕ್ಕೆ ಹೆಚ್ಚುವರಿ ಬಸ್ ಗಳನ್ನ ಬಿಟ್ಟು ಲಾಭ ಪಡೆಯೋಕೆ ಸಾರಿಗೆ ಇಲಾಖೆ ಮುಂದಾಗಿದೆ.ಹೆಚ್ಚುವರಿ ಬಸ್ ಬಿಡೋದಾಗಿ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

12.11.2023 ರಂದು ನರಕ ಚತುರ್ದಶಿ ಹಾಗೂ ದಿನಾಂಕ:14.11.2023 ರಂದು ಬಲಿಪಾಡ್ಯಮಿ ಹಬ್ಬ ಇದೆ.ಹೀಗಾಗಿ ಎಡದು ದಿನ ಮುಂಚೆನೇ ಪ್ರಯಾಣಿಕರು ಊರುಗಳಿಗೆ ತೆರಳುತ್ತಾರೆ.ಇದೆ 10ನೇ ತಾರೀಕಿನಿಂದ ಬಸ್ ಗಳು ಬಿಡಲಾಗುತ್ತೆ.ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 14.11.2023 ಹಾಗೂ 15.11.2023 ರಂದು ವಿಶೇಷ ವಾಹನಗಳನ್ನು ಬಿಡಲಾಗುತ್ತೆ.ಮುಂಗಡ ಟಿಕೆಟ್ ಬುಕಿಂಗ್ ವ್ಯವಸ್ಥೆ ಕೂಡ ಮಾಡಿಕೊಡಲಾಗಿದೆ.

ಮುಂಗಡ ಟಿಕೆಟ್ ಬುಕಿಂಗ್ ಮಾಡೋರಿಗೆ ರಿಯಾಯಿತಿ ಕೊಡಲಾಗುತ್ತೆ.ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು.ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.ದಸರಾದಂತೆ ದೀಪಾವಳಿಯಲ್ಲೂ ಸಾರಿಗೆ ಇಲಾಖೆ ಲಾಭ ಪಡಿಯೋಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments