Webdunia - Bharat's app for daily news and videos

Install App

ರಾಜ್ಯದಲ್ಲಿ ಮುಂದಿನ 5 ದಿನ ಉತ್ತಮ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

sampriya
ಬುಧವಾರ, 5 ಜೂನ್ 2024 (15:42 IST)
ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಕ್ಕೆ ಆಗಮಿಸಿ ಐದಾರು ದಿನ ಕಳೆಯುತ್ತಿದ್ದಂತೆ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಮುಂದಿನ 5 ದಿನ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

 ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ.

ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments