Select Your Language

Notifications

webdunia
webdunia
webdunia
webdunia

ಶಾ ವಿರುದ್ಧ ಗೂಂಡಾ ರೌಡಿ ಹೇಳಿಕೆ: ಯತೀಂದ್ರಗೆ ನೋಟಿಸ್ ಜಾರಿ

LokhSabha election 2024
ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ  ಎಂದು ಅವರ ವಿರುದ್ಧ ಹೇಳಿಕೆ ನೀಡಿದ್ದ  ಕಾಂಗ್ರೆಸ್‌ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ.

 ಹೇಳಿಕೆ ಬಗ್ಗೆ ವಿವರಣೆ ನೀಡುವಂತೆ ನೊಟೀಸ್‌ನಲ್ಲಿ ಯತೀಂದ್ರ ಅವರಿಗೆ ಹೇಳಲಾಗಿದೆ.

ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತೀಂದ್ರ ಅವರು ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಮಾತಿನ ಭರಾಟೆಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಗೂಂಡಾ, ರೌಡಿ. ಗುಜರಾತ್‌ನಲ್ಲಿ
ಅವರ ಮೇಲೆ ಕೊಲೆ ಪ್ರಕರಣಗಳಿವೆ ಎಂದಿದ್ದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಸ್ವಕ್ಷೇತ್ರ ವರುಣಾದಲ್ಲಿ ಮತಕ್ಕಾಗಿ ಅಂಗಾಲಾಚಿದ ಸಿಎಂ ಸಿದ್ದರಾಮಯ್