ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ

Webdunia
ಶುಕ್ರವಾರ, 5 ಜುಲೈ 2019 (09:56 IST)
ಮಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.




ಇವರಿಗೆ 66 ವರ್ಷ ವಯಸ್ಸಾಗಿದ್ದು, ಗುರುವಾರ ಮಧ್ಯಾಹ್ನ ಬೆಂಗಳೂರಿಂದ ಮಂಗಳೂರಿಗೆ ಕೆಎಸ್ಆರ್‌ಟಿಸಿ ಬಸ್‍ ನಲ್ಲಿ ಹೋಗುತ್ತಿದ್ದಾಗ ಅಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದು, ರಾತ್ರಿ 10.40ರ ವೇಳೆಗೆ ಮಂಗಳೂರು ಬಸ್ ನಿಲ್ದಾಣ ತಲುಪಿದ ವೇಳೆ  ಶಾಸಕರನ್ನು ಕಂಡೆಕ್ಟರ್ ಎಬ್ಬಿಸಲು ಬಂದಾಗ  ಅವರು ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆ ಪೊಲೀಸರ ಸಹಾಯದಿಂದ ತಕ್ಷಣ ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ..


ಇವರು, 1998 ಮತ್ತು 2008ರಲ್ಲಿ ಕಾರ್ಕಳದಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ವಿರುದ್ಧ ಸೋಲು ಕಂಡಿದ್ದರು. ಸದ್ಯ ಕೆಪಿಸಿಸಿ ಕಾರ್ಯದರ್ಶಿ ಆಗಿದ್ದರು. ಇಂದು ಬೆಳಗ್ಗೆ 9 ಗಂಟೆಗೆ ಹುಟ್ಟೂರು ಹೆಬ್ರಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments