Select Your Language

Notifications

webdunia
webdunia
webdunia
webdunia

ಗೊರಗುಂಟೆಪಾಳ್ಯ ಫ್ಲೈ ಓವರ್ ಕ್ಲೋಸ್

ಗೊರಗುಂಟೆಪಾಳ್ಯ ಫ್ಲೈ ಓವರ್  ಕ್ಲೋಸ್
ಬೆಂಗಳೂರು , ಮಂಗಳವಾರ, 28 ಡಿಸೆಂಬರ್ 2021 (14:38 IST)
ಪೀಣ್ಯ ಫ್ಲೈ ಓವರ್ ನಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರರು ಪರದಾಡುತ್ತಿದ್ದಾರೆ. ಇನ್ನೂ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ನಮ್ಮ ಮೆಟ್ರೋ ಆಯ್ಕೆ ಮಾಡಿಕೊಂಡಿದ್ದಾರೆ.
ಪ್ರಯಾಣಿಕರು ಮೆಟ್ರೋ ಆಯ್ಕೆ ಮಾಡಿಕೊಂಡಿದ್ದರಿಂದ ಮೆಟ್ರೋ ಹೊರಭಾಗದಲ್ಲಿ ನೂರಕ್ಕೂ ಹೆಚ್ಚು ಮಂದಿ ಕ್ಯೂ ನಿಂತಿರುವುದು ಕಂಡು ಬಂದಿದೆ. ಈ ಹಿನ್ನೆಲೆ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇನ್ನೊಂದು ಬದಿ ಎಂಟ್ರೆನ್ಸ್ ಒಪನ್ ಮಾಡಲಾಗಿದ್ದು, ಆದರೆ ದಾಸರಹಳ್ಳಿಯಲ್ಲಿ ಪ್ರಯಾಣಿಕರ ಕ್ಯೂ ಮುಂದುವರೆದಿದೆ. ಜನವರಿ ಮೂರರ ತನಕ ಬಂದ್ ಇರುವುದರಿಂದ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ