Publish Date: Sat, 22 Apr 2023 (17:30 IST)
Updated Date: Sat, 22 Apr 2023 (17:15 IST)
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ತೀರ್ಮಾನ ಮಾಡಿದ್ದಾರೆ.. ಗೌಡಹಳ್ಳಿ ಗ್ರಾಮದ ಮೂಲಕ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಹಾದು ಹೋಗಿದ್ದು, ಹೆದ್ದಾರಿಗೆ ಅಂಡರ್ ಪಾಸ್ ನಿರ್ಮಿಸದ ಹಿನ್ನೆಲೆ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.. ಹೆದ್ದಾರಿಯಲ್ಲಿ ಅಂಡರ್ ಪಾಸ್ ಸೇತುವೆಯಿಲ್ಲದೇ ಗ್ರಾಮಸ್ಥರು ರಸ್ತೆ ದಾಟಲು ಕಿಲೋ ಮೀಟರ್ಗಟ್ಟಲೆ ದೂರ ಸುತ್ತಿ ಬರಬೇಕಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮಸ್ಥರ ಮನವಿಗೆ ಸರಿಯಾಗಿ ಸ್ಪಂದಿಸಿಲ್ಲ..ಈ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ.. ಕೆಲಸ ಆಗದ ಹೊರತು ಜನಪ್ರತಿನಿಧಿಗಳು ಗ್ರಾಮಕ್ಕೆ ವೋಟು ಕೇಳಲು ಬಾರದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.