Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದಿಂದ ಹೆಣ್ಣುಮಕ್ಕಳಿಗೆ ಫ್ರೀ..ಫ್ರೀ.. ಗಂಡು ಮಕ್ಕಳಿಗೆ ಬರೆ ಗ್ಯಾರಂಟಿ

BJP Protest

Krishnaveni K

ಬೆಂಗಳೂರು , ಶುಕ್ರವಾರ, 3 ಜನವರಿ 2025 (13:37 IST)
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
 
ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
 
ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಮುಖವಾಡ ಧರಿಸಿದ್ದರು. ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಲಾಯಿತು. ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ ಕಾಯುತ್ತಿದ್ದೆವು. ಮೋದಿಯವರು ಹೊಸ ವರ್ಷಕ್ಕೆ ನಿಜವಾದ ಗಿಫ್ಟ್ ಕೊಟ್ಟಿದ್ದಾರೆ. ರಾಜ್ಯ ಸರಕಾರ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯನವರು ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ ಎಂದು ಟೀಕಿಸಿದರು. 
 
ಈ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿದಿನ ತೆರಿಗೆ ಹೆಚ್ಚಳ, ಟ್ಯಾಕ್ಸ್ ಏರಿಕೆಯದೇ ಸಾಧನೆ ಮಾಡುತ್ತಿದೆ. ರಾಜ್ಯ ಸರಕಾರವು ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿದೆ. ಆದರೆ, ಬೆಲೆ ಏರಿಕೆ ನಿರಂತರವಾಗಿ ಸಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
 
ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಹೆಣ್ಮಕ್ಕಳಿಗೆ ಉಚಿತ ಪ್ರಯಾಣದರ ನೀಡಿ, ಗಂಡಸರಿಗೆ ಬರೆ ಹಾಕುವ ಸರಕಾರ ಇದೆಂದು ಆಕ್ಷೇಪ ವ್ಯಕ್ತಪಡಿಸಿದರು. ಗ್ಯಾರಂಟಿ ಕಾರಣಗಳಿಂದ ಇವತ್ತು ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಿದ್ದೀರಿ. ವಿದ್ಯುತ್ ದರ ಏರಿಕೆ ಮಾಡಿದ್ದೀರಿ. ಸ್ಟಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಖಂಡಿಸಿದರು.
 
ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರಕಾರ ಇದಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ದಿನ ದೂಡಲು ಬರೆ ಹಾಕುವ ಕೆಲಸ ಮಾಡಿದ್ದಾರೆ. ಮೂರನೇ ದಿನಕ್ಕೆ ಮೂರು ನಾಮ ಹಾಕುವ ಕೆಲಸವನ್ನು ಸರಕಾರ ಮಾಡಿದೆ ಎಂದು ಟೀಕಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ಪ್ರತಿಭಟನೆ: ರಾಮಲಿಂಗಾ ರೆಡ್ಡಿ ಟಾಂಗ್: ವಿಡಿಯೋ