Select Your Language

Notifications

webdunia
webdunia
webdunia
webdunia

ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ಕಾರ ಸರ್ವಸನ್ನಧ: ಸಿದ್ದರಾಮಯ್ಯ

Karnataka Congress Government, Belgaum session, Chief Minister Siddaramaiah,

Sampriya

ಹುಬ್ಬಳ್ಳಿ , ಭಾನುವಾರ, 8 ಡಿಸೆಂಬರ್ 2024 (18:50 IST)
ಹುಬ್ಬಳ್ಳಿ:  ಈವರೆಗೆ ರಾಜ್ಯ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.

ಬಳ್ಳಾರಿಯಲ್ಲಿ ನಡೆದ ಸರಣಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು,  ಔಷಧಿ ಖರೀದಿಯಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ. ಬಳ್ಳಾರಿ ಘಟನೆಗೆ ಸಂಬಂಧಿಸಿ ನಾವು ಈಗಾಗಲೇ ಪರಿಶೀಲನಾ ತಂಡ ರಚಿಸಿದ್ದು, ವರದಿ ಬಂದ್ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಣಂತಿಯರಿಗೆ ತಲಾ ₹5 ಲಕ್ಷ ಪರಿಹಾರ ನೀಡುವಂತೆಯೂ ಅದೇಶಿಸಲಾಗಿದೆ ಎಂದರು.

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಲ್ನಾಡುವಿನಲ್ಲಿ ಪೂಜೆ ಸಲ್ಲಿಸಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ನಾಲ್ವರು ದುರ್ಮರಣ