Daily Horoscope
✕

70 ವರ್ಷದ ನಂತರ ಬಂತು ಸರ್ಕಾರಿ ಬಸ್....!

Webdunia
ಗುರುವಾರ, 19 ಜುಲೈ 2018 (15:10 IST)
ಜಿಲ್ಲಾ ಕೇಂದ್ರದಿಂದ ನಾಲ್ಕು ಕಿ.ಮೀ. ದೂರ ಇದ್ದರೂ ಆ ಗ್ರಾಮದ ಜನ್ರು ನಿತ್ಯ ನಡೆದುಕೊಂಡೆ ಹೋಗಬೇಕಿತ್ತು. ಸ್ವಾತಂತ್ರ್ಯ ಸಿಕ್ಕು 7 ದಶಕಗಳೆ ಕಳೆದ್ರು ಈ ಗ್ರಾಮಕ್ಕೆ ಸರ್ಕಾರಿ ಬಸ್ಸಿನ ವ್ಯವಸ್ಥೆ ಇರಲಿಲ್ಲ. ಇಲ್ಲಿನ ಶಾಲಾ - ಕಾಲೇಜ್ ವಿದ್ಯಾರ್ಥಿಗಳು, ಸಾರ್ವಜನಿಕರು ನಾಲ್ಕು ಕಿಲೋ ಮೀಟರ್ ವರೆಗೆ ನಡೆದುಕೊಂಡೇ ಹೋಗಬೇಕಾಗಿತ್ತು. ಈಗ ಆ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರಿ ಆರಂಭವಾಗಿದೆ. ಹಾಗಾಗಿ ಈ ಗ್ರಾಮದಲ್ಲಿ ಹಬ್ಬದ ವಾತವರಣ ನಿರ್ಮಾಣವಾಗಿದೆ.

ಯಾದಗಿರಿಯಿಂದ ಕೂಗಳತೆ ದೂರದಲ್ಲಿರುವ ಬೀರಾಳ ಪುಟ್ಟ ಗ್ರಾಮ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರಿರುವ ಈ  ಗ್ರಾಮಕ್ಕೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಕಳೆದ ಐವತ್ತು ವರ್ಷಗಳಿಂದ ಗ್ರಾಮಸ್ಥರು ಬಸ್ಸು ಬಿಡುವಂತೆ  ಜನ ಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿದ್ರು ಪ್ರಯೋಜನವಾಗಿರಲಿಲ್ಲ. ಈ ಬಾರಿ ಯಾದಗಿರಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಶಾಸಕರಾಗಿ ಆಯ್ಕೆಯಾದ ಮೇಲೆ, ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ.

ಶಾಸಕರು ಇಂದು ಗ್ರಾಮಕ್ಕೆ ಆಗಮಿಸಿ ಬಸ್ಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಇದರಿಂದ ಗ್ರಾಮಸ್ಥರೇ ಖುಷಿಯಿಂದ ಬಸ್ಸಿಗೆ ಹೂವಿನ ಅಲಂಕಾರ ಮಾಡಿ ಸರ್ಕಾರಿ ಬಸ್ಸ್ ಸ್ವಾಗತಿಸಿದರು. ಅಲ್ಲದೆ ಸ್ವತಃ ಶಾಸಕ ವೆಂಕಟರೆಡ್ಡಿ ಮುದ್ನಾಳ ಬಸ್ಸಿನಲ್ಲಿ ಕುಳಿತು ಟಿಕೆಟ್ ಪಡೆದು ಪ್ರಯಾಣಿಸಿದರು. ಗ್ರಾಮದ ಶಾಲಾ -ಕಾಲೇಜು ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶಾಸಕರಿಗೆ ಅಭಿನಂದನೆಗಳು ಹೇಳಿ ಸಂತೋಷದಿಂದ ಹೊಸ ಬಸ್ಸಿನಲ್ಲಿ ಮೊದಲ ಪ್ರಯಾಣ ಬೆಳೆಸಿ ಖುಷಿಪಟ್ರು‌.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments